
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಸಿಕ್ಕಿದೆ. 2020 -21 ನೇ ಸಾಲಿಗೆ ತಾತ್ಕಾಲಿಕ ಬೋನಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಬ್ಬದ ಸಂದರ್ಭದಲ್ಲಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಲಾಗಿದೆ.
ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೇಂದ್ರ ಸರ್ಕಾರಿ ನೌಕರರು, ಸಶಸ್ತ್ರ ಪಡೆಗಳ ಸಿಬ್ಬಂದಿ, ಕೇಂದ್ರೀಯ ಅರೆಸೇನಾ ಪಡೆಗಳು ಬೋನಸ್ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. 2020 – 21 ನೇ ಆರ್ಥಿಕ ವರ್ಷದಲ್ಲಿ ಕನಿಷ್ಠ ಆರು ತಿಂಗಳು ಸೇವೆ ಸಲ್ಲಿಸಿದವರಿಗೆ ಬೋನಸ್ ನೀಡಲಾಗುವುದು. ಗ್ರೂಪ್ ಬಿ ಮತ್ತು ಸಿ ನಲ್ಲಿರುವ ಎಲ್ಲಾ ನಾನ್ ಗೆಜೆಟೆಡ್ ನೌಕರರಿಗೆ ಬೋನಸ್ ಲಭ್ಯವಾಗಲಿದೆ ಎಂದು ಹೇಳಲಾಗಿದೆ.