alex Certify ಮತ್ತಷ್ಟು ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತಷ್ಟು ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಮುಂದಿನ ಐದು ವರ್ಷಗಳಲ್ಲಿ ಹುಬ್ಬಳ್ಳಿ ಸೇರಿದಂತೆ ದೇಶದ 25 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ಹೊಂದಿದೆ ಎಂದು ವಿಮಾನಯಾನ ಸಚಿವ ಜನರಲ್ ವಿ.ಕೆ. ಸಿಂಗ್ ಲೋಕಸಭೆಗೆ ಕೊಟ್ಟ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ (ಎನ್‌ಎಂಪಿ) ಅಡಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 25 ವಿಮಾನ ನಿಲ್ದಾಣಗಳನ್ನು 2022-2025ರ ನಡುವೆ ಖಾಸಗೀಕರಣಗೊಳಿಸಲು ಗುರುತು ಮಾಡಿರುವುದಾಗಿ ತಿಳಿಸಿದ್ದಾರೆ ಸಿಂಗ್.

2019 ಹಾಗೂ 2020ರ ವಿತ್ತೀಯ ವರ್ಷಗಳಲ್ಲಿ ವಾರ್ಷಿಕ 4 ಲಕ್ಷಕ್ಕಿಂತಲೂ ಹೆಚ್ಚಿನ ಪ್ರಯಾಣಿಕರ ಓಡಾಟ ಕಂಡ ವಿಮಾನ ನಿಲ್ದಾಣಗಳನ್ನು ರಾಷ್ಟ್ರೀಯ ಮೂಲಸೌಕರ್ಯ ಪೈಪ್‌ಲೈನ್ ಅಡಿ ಯೋಜಿಸಲಾದಂತೆ ಅಭಿವೃದ್ಧಿಗೊಳಿಸಲು ಆಯ್ಕೆ ಮಾಡಲಾಗಿದೆ.

ಭುವನೇಶ್ವರ, ವಾರಣಾಸಿ, ಅಮೃತಸರ, ಇಂದೋರ್‌, ತ್ರಿಚಿ, ರಾಯ್ಪುರ, ಕ್ಯಾಲಿಕಟ್‌, ಸೂರತ್‌, ಮಧುರೈ, ಕೊಯಮತ್ತೂರು, ನಾಗ್ಪುರ, ಪಟನಾ, ರಾಂಚಿ, ಜೋಧ್ಪುರ, ಚೆನ್ನೈ, ವಿಜಯವಾಡಾ, ಹುಬ್ಬಳ್ಳಿ, ತಿರುಪತಿ, ಭೋಪಾಲ್, ವಡೋದರಾ, ಇಂಫಾಲ್, ಅಗರ್ತಲಾ, ಉದಯ್ಪುರ, ಡೆಹ್ರಾಡೂನ್ ಹಾಗೂ ರಾಜಮಂಡ್ರಿ ವಿಮಾನಗಳ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಯ ಕೆಲಸಗಳನ್ನು ಖಾಸಗೀಕರಣಗೊಳಿಸುವ ಸಂಬಂಧ ರೂಪುರೇಷೆಗಳನ್ನು ಸರ್ಕಾರ ಸಿದ್ಧಪಡಿಸುತ್ತಿದೆ.

BIG NEWS: ತಬ್ಲಿಘಿ ಜಮಾತ್‌ ನಿಷೇಧಿಸಿದ ಸೌದಿ ಅರೇಬಿಯಾ

ಇದೇ ವೇಳೆ ದೇಶದ 13 ವಿಮಾನ ನಿಲ್ದಾಣಗಳ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಯ ಕೆಲಸಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಲ್ಲಿ (ಪಿಪಿಪಿ) ಮಾಡಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ. ಇದೇ ಪಿಪಿಪಿ ಅಡಿ ಅಹಮದಾಬಾದ್, ಜೈಪುರ, ಲಖನೌ, ಗುವಾಹಾಟಿ, ತಿರುವನಂತಪುರ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಯ ಕೆಲಸಗಳನ್ನು 50 ವರ್ಷಗಳ ಮಟ್ಟಿಗೆ ಗುತ್ತಿಗೆಗೆ ನೀಡಲಾಗಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇರ ಉಸ್ತುವಾರಿಯಲ್ಲಿ ನಾಗರಿಕ ವಿಮಾನಯಾನದ ಮಹಾ ನಿರ್ದೇಶಕರು 136 ವಿಮಾನ ನಿಲ್ದಾಣಗಳ ಮೇಲೆ ನಿಯಂತ್ರಣ ಹೊಂದಿದ್ದು, ಇವುಗಳಲ್ಲಿ 7 ವಿಮಾನ ನಿಲ್ದಾಣಗಳನ್ನು ಪಿಪಿಪಿ ಅಡಿ ತರಲಾಗಿದೆ.

ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್, ಕಣ್ಣೂರು ಹಾಗೂ ಚಂಡೀಘಡ ವಿಮಾನ ನಿಲ್ದಾಣಗಳನ್ನು ಹೀಗೆ ಪಿಪಿಪಿಅಡಿ ನಿರ್ವಹಣೆ, ಕಾರ್ಯಾಚರಣೆ ಹಾಗೂ ಅಭಿವೃದ್ಧಿಯ ಕೆಲಸಗಳನ್ನು ತರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...