ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರನ್ನು ಒದಗಿಸುವ ಬಗ್ಗೆ ಸರ್ಕಾರ ಸಮ್ಮತಿಸಿದ್ದು, ನವೆಂಬರ್ ನಿಂದ ಪೂರೈಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಮೈಸೂರಿನಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಶಿಕ್ಷಣ ಸಚಿವರು, ಎಷ್ಟೋ ಶಾಲೆಗಳಲ್ಲಿ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದರೆ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ ಎಂದರು.
ಅಲ್ಲದೇ ಸರ್ಕಾರಿ ಶಾಲೆಗಳಲ್ಲಿಯೂ ಹಲವು ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಬಹುದಾಗಿದೆ. ಎಷ್ಟೋ ಶಾಲೆಗಳಲ್ಲಿ ವಿದ್ಯುತ್ ಬಿಲ್ ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಉಚಿತ ವಿದ್ಯುತ್ ನೀಡುವುದರಿಂದ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ಇನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ. ಮಕ್ಕಳ ಪೋಷ್ಟಿಕಾಂಶ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು.