
ಬೆಂಗಳೂರು: ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದೂ ಅಲ್ಲದೇ, ತನ್ನ ಬೈಕ್ ತೊಳೆಸಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಶಾಲೆಯಲ್ಲಿ ನಡೆದಿದೆ.
ಮಕ್ಕಳು ಶೌಚಾಲಯ ಹಾಗೂ ಶಿಕ್ಷಕಿಯ ಸ್ಕೂಟಿ ಕ್ಲೀನ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.