ಬೆಂಗಳೂರು: ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನನಲ್ಲಿ ಆಯೋಜಿಸಿದ ಸಮತ್ವ ಸಿಎಸ್ಆರ್ ಶಿಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿ, ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಕಲ್ಪಿಸುವ ಗುರಿಯೊಂದಿಗೆ ಸಿಎಸ್ಆರ್ ನಿಧಿ ಬಳಕೆ ಮಾಡಿಕೊಂಡು ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆಯಿದ್ದು, 45,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದ್ದು, ಶೀಘ್ರದಲ್ಲಿ 5000 ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರದಿಂದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಉಚಿತವಾಗಿ ನೀಡಲಾಗುತ್ತಿದೆ. ಅಜೀಂ ಪ್ರೇಂ ಜೀ ಫೌಂಡೇಶನ್ 1,500 ಕೋಟಿ ರೂ. ವೆಚ್ಚದಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಲು ಒಪ್ಪಂದವಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.