ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂಬಂಧಿ ಯುವಕನೇ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಓದುವ ವಯಸ್ಸಿನಲ್ಲಿ 6 ತಿಂಗಳ ಗರ್ಭಿಣಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಆರೈಕೆ ಮಾಡಲಾಗುತ್ತಿದೆ.
ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುಅರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಈ ಘಟನೆ ಬೆಳಕಿಗೆ ಬಂದಿದೆ.