ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PMAY) 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಲೋಕಸಭೆಗೆ ಲಿಖಿತ ಉತ್ತರ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಈ ತಿಂಗಳ 10 ರವರೆಗೆ 118 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದರಲ್ಲಿ 1,12,22,000 ಮನೆಗಳ ನಿರ್ಮಾಣಕ್ಕೆ ಗ್ರೌಂಡ್ ಮಾಡಲಾಗಿದ್ದು, 75,31,000 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಯೋಜನೆಯಡಿ 28 ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.