alex Certify ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PMAY) 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಲೋಕಸಭೆಗೆ ಲಿಖಿತ ಉತ್ತರ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಈ ತಿಂಗಳ 10 ರವರೆಗೆ 118 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದರಲ್ಲಿ 1,12,22,000 ಮನೆಗಳ ನಿರ್ಮಾಣಕ್ಕೆ ಗ್ರೌಂಡ್ ಮಾಡಲಾಗಿದ್ದು, 75,31,000 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಯೋಜನೆಯಡಿ 28 ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...