ನವದೆಹಲಿ: ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ಕೇಂದ್ರ ಸರ್ಕಾರ 577 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ.
ಪ್ರವಾಹದಿಂದ ತತ್ತರಿಸಿದ ರಾಜ್ಯಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಿಂದ 577.84 ಕೋಟಿ ರೂಪಾಯಿ ಪರಿಹಾರ ಮಂಜೂರು ಮಾಡಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೈಸರ್ಗಿಕ ವಿಕೋಪ ಪರಿಹಾರ ನಿಧಿ ಪರಿಹಾರ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ ನೆರವು ಸಿಗಲಿದ್ದು, ಇದಕ್ಕಾಗಿ 577.84 ಕೋಟಿ ರೂ. ಮಂಜೂರು ಮಾಡಲಾಗಿದೆ.