alex Certify ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ

ನವದೆಹಲಿ: ದೇಶಾದ್ಯಂತ 2000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸಹಕಾರ ಸಚಿವಾಲಯ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ಜನೌಷಧಿ ಕೇಂದ್ರ ಆರಂಭಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಜನೌಷಧಿ ಕೇಂದ್ರಗಳನ್ನು ಆಗಸ್ಟ್ ವೇಳೆಗೆ ಆರಂಭಿಸಲಾಗುವುದು. ಡಿಸೆಂಬರ್ ವೇಳೆಗೆ ಉಳಿದ ಜನೌಷಧಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಹಕಾರ ಸಚಿವಾಲಯ ತಿಳಿಸಿದೆ.

ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ತೆರೆಯುವುದರಿಂದ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿ ಆಗಲಿದ್ದು, ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಕೈಗೆಟುಕುವ ದರದಲ್ಲಿ ಔಷಧಗಳು ಲಭ್ಯವಾಗಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...