alex Certify ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಗುಡ್‌ ನ್ಯೂಸ್: GST ವ್ಯಾಪ್ತಿಗೆ ಪೆಟ್ರೋಲ್ – ಡೀಸೆಲ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಗುಡ್‌ ನ್ಯೂಸ್: GST ವ್ಯಾಪ್ತಿಗೆ ಪೆಟ್ರೋಲ್ – ಡೀಸೆಲ್…?

ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ ಮತ್ತು ವಿಮಾನ ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಸಾಧ್ಯತೆಯಿದೆ. ಜಿಎಸ್‌ಟಿ ಕೌನ್ಸಿಲ್‌ನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ವಾರ ಲಕ್ನೋದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಹೊರ ಬರಲಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಜಿಎಸ್‌ಟಿ ಅನ್ವಯವಾಗುವ ದಿನಾಂಕವನ್ನು ಜಿಎಸ್‌ಟಿ ಕೌನ್ಸಿಲ್ ಇನ್ನೂ ಘೋಷಿಸಿಲ್ಲ. ಆದಾಯದ ದೃಷ್ಟಿಯಿಂದ, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಏಕರೂಪದ ಜಿಎಸ್ಟಿ ವಿಧಿಸಲು ಕೌನ್ಸಿಲ್ ಸಿದ್ಧವಿಲ್ಲವೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 2019-20ರ ಆರ್ಥಿಕ ವರ್ಷದಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳಿಂದ 5.55 ಲಕ್ಷ ಕೋಟಿ ಆದಾಯವನ್ನು ಗಳಿಸಿತ್ತು. ಪೆಟ್ರೋಲ್ ಮತ್ತು ಡೀಸೆಲ್‌ನಿಂದ ಗರಿಷ್ಠ ಆದಾಯ ಸರ್ಕಾರಕ್ಕೆ ಸಿಕ್ಕಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ್ದು, ಈ ವಿಷಯ ಸೆಪ್ಟೆಂಬರ್ 17 ರಂದು ನಡೆಯುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಚರ್ಚೆಯಾಗಲಿದೆ. ಜಿಎಸ್‌ಟಿ ಕೌನ್ಸಿಲ್ ಎಲ್ಲಾ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಸಾಧ್ಯತೆ ಕಡಿಮೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೈಸರ್ಗಿಕ ಅನಿಲ ಮತ್ತು ವಾಯುಯಾನ ಇಂಧನದಂತಹುಗಳ ಮೇಲೆ ಜಿಎಸ್ಟಿ ವಿಧಿಸುವ ಸಾಧ್ಯತೆಯಿದೆ.

ಏಕರೂಪದ ಜಿಎಸ್‌ಟಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ. ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.19 ರೂಪಾಯಿಯಿದೆ. ಡೀಸೆಲ್ ಬೆಲೆ ಲೀಟರ್ ಗೆ 88.62 ರೂಪಾಯಿಯಿದೆ. ಸಭೆಯಲ್ಲಿ ಕೊರೊನಾ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳು ಮತ್ತು ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...