ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮಕೈಗೊಂಡಿದ್ದು, ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನ್ಯ ಸಂಪತ್ತು ರಕ್ಷಣೆಗೆ ಆದ್ಯತೆ ನೀಡಲಾಗಿದ್ದು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಹೇಳಿದ್ದಾರೆ.