ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ ಸರ್ಕಾರಿ ನೌಕರರು ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು 5 ಲಕ್ಷ ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಸಾಮಾನ್ಯ ಭವಿಷ್ಯ ನಿಧಿಗೆ ಚಂದಾದಾರರು ಪಾವತಿಸಬಹುದಾದ ವಂತಿಗೆಯನ್ನು 5 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈ ಅಂಶವನ್ನು ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.