alex Certify ದೇಶದಲ್ಲೇ ಮೊದಲಿಗೆ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಟೋಲ್: ವಾಹನ ಚಲಿಸಿದ ದೂರಕ್ಕಷ್ಟೇ ಶುಲ್ಕ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲೇ ಮೊದಲಿಗೆ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಟೋಲ್: ವಾಹನ ಚಲಿಸಿದ ದೂರಕ್ಕಷ್ಟೇ ಶುಲ್ಕ ಶೀಘ್ರ

ನವದೆಹಲಿ: ವಾಹನಗಳು ಚಲಿಸಿದ ದೂರಕ್ಕೆ ಮಾತ್ರ ಟೋಲ್ ಶುಲ್ಕ ವಿಧಿಸುವ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು -ಮೈಸೂರು ಹೆದ್ದಾರಿ ಸೇರಿ ದೇಶದ ಎರಡು ಹೈವೇಗಳಲ್ಲಿ ಆರಂಭವಾಗಲಿದೆ.

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇ, ದೆಹಲಿ -ಜೈಪುರ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜಿಪಿಎಲ್ ಟೋಲ್ ಶುಲ್ಕ ಆರಂಭವಾಗಲಿದ್ದು, ನಂತರ ದೇಶದೆಲ್ಲೆಡೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಈಗಾಗಲೇ ದೆಹಲಿ-ಜೈಪುರ ಹೆದ್ದಾರಿಯಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಗೆ ಜಿಯೋ ಫೆನ್ಸಿಂಗ್ ಕೆಲಸ ಆರಂಭಿಸಲಾಗಿದೆ ಎಂದು ಹೆದ್ದಾರಿ ಸಚಿವಾಲಯ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...