alex Certify ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ಕೌನ್ಸಿಲಿಂಗ್’ ಪ್ರಕ್ರಿಯೆ ದಿನಾಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ಕೌನ್ಸಿಲಿಂಗ್’ ಪ್ರಕ್ರಿಯೆ ದಿನಾಂಕ ಪ್ರಕಟ

 

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕ (1 ರಿಂದ 8 ನೇ ತರಗತಿ) ನೇಮಕಾತಿ ಕೌನ್ಸಿಲಿಂಗ್ ದಿನಾಂಕ ಪ್ರಕಟವಾಗಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಸೂಚಿಸಿದ ಸ್ಥಳಕ್ಕೆ ಕೌನ್ಸಿಲಿಂಗ್ ಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಸೂಚನೆ  ನೀಡಿದೆ.

ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 de Adot: 12/10/2023 ದಿನಾಂಕ:08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 19/10/2023 ರಂದು ಶಾಲಾ ಶಿಕ್ಷಣ ಇಲಾಖೆಯ https://schooleducation.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.

ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳನಿಯುಕ್ತಿ ಕೌನ್ಸಿಲಿಂಗ್‌ನ್ನು ದಿನಾಂಕ:21/10/2023 ರಿಂದ ಬೆಳಿಗ್ಗೆ 10.30 ಗಂಟೆಯಿಂದ ರಾಜ್ಯದ (371ಜೆ ಗೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಕರಣಗಳು ಬಾಕಿ ಇರುವ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ ಮತ್ತು ಬಿ.ಬಿ.ಎಂ.ಪಿ ವ್ಯಾಪ್ತಿಯ 8% ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳನ್ನು ಹೊರತುಪಡಿಸಿ) ಜಿಲ್ಲೆಗಳಲ್ಲಿನ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಿಯವರಾದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರ ಕಛೇರಿಯಲ್ಲಿ ನಡೆಸಲಾಗುವುದು.

ಆದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು. ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...