2021-22 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿಗಳ) ನೇಮಕಾತಿಗಾಗಿ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆದಿದ್ದು, ಜಾತಿ ಮೀಸಲಾತಿಯಲ್ಲಿ ಅರ್ಜಿ ಸಲ್ಲಿಸಿ ಸಾಮಾನ್ಯ GM ನಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗಿರುವುದರಿಂದ ಅಭ್ಯರ್ಥಿಗಳು ಆರ್‍ಡಿ ಸಂಖ್ಯೆ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದಾಖಲೆಗಳೊಂದಿಗೆ ಹಾಜರಾಗಿ ಈಗಾಗಲೇ ಸಲ್ಲಿಸಿದ ಅರ್ಜಿಯ ಜೊತೆಗೆ ದೃಢೀಕರಣದೊಂದಿಗೆ ದ್ವಿ ಪ್ರತಿಗಳನ್ನು ಜುಲೈ 20 ರಿಂದ ಆಗಸ್ಟ್ 05 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 05.30 ರವರೆಗೆ ಉಪನಿರ್ದೇಶಕರ ಕಾರ್ಯಾಲಯದ ಸರ್ಕಾರಿ ಪ್ರಾಥಮಿಕ ಪದವೀಧರ ಶಾಲಾ ಶಿಕ್ಷಕರ (6-8 ನೇ) ತರಗತಿಗಳ ನೇಮಕಾತಿ ವಿಭಾಗಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕ(ಆಡಳಿತ)ರ ಮೊ.9448999329, ಶಿಕ್ಷಣಾಧಿಕಾರಿಗಳು ಹಾಗೂ ನೋಡೆಲ್ ಅಧಿಕಾರಿಗಳ ಮೊ.9980593516, ಉಪನಿರ್ದೇಶಕರ ಕಚೇರಿಯ ವಿಷಯ ನಿರ್ವಹಕರ ಮೊ.9901555582 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.