ಬೆಂಗಳೂರು: ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸದೆ ನೇರವಾಗಿ ಆರರಿಂದ ಎಂಟನೇ ತರಗತಿಗೆ ನಿಯೋಜಿಸುವ ಕುರಿತಾದ ಪ್ರಸ್ತಾವನೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
ಕರ್ತವ್ಯ ನಿರ್ವಹಿಸುತ್ತಿರುವ ಸೇವಾ ನಿರತ ಪದವೀಧರ ಶಿಕ್ಷಕರಲ್ಲಿ ಶೇಕಡ 40ರಷ್ಟು ಮಂದಿಯನ್ನು ಪರೀಕ್ಷೆ ನಡೆಸದೆ ಆರರಿಂದ ಎಂಟನೇ ತರಗತಿಗೆ ಬಡ್ತಿ ನೀಡುವ ಸಂಬಂಧ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಇಂದು ನಡೆಯಲಿರುವ ಸಂಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಸಂಪುಟ ಸಭೆಯಲ್ಲಿ ಚರ್ಚೆ ಇಲ್ಲದೆ ಅನುಮೋದನೆ ಸಿಗುವ ನಿರೀಕ್ಷೆ ಇದ್ದು, ವಿಳಂಬವಾದರೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವ ಕಾರಣಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರಿಗೆ ಬಡ್ತಿ ನೀಡುವ ಬಗ್ಗೆ ಒಪ್ಪಿಗೆ ನೀಡಬಹುದು. ಸಂಪುಟ ಅನುಮೋದನೆ ದೊರೆತಲ್ಲಿ 75,000ಕ್ಕೂ ಹೆಚ್ಚು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.