
ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಭರ್ತಿ ಮಾಡಿಕೊಳ್ಳಲು ಜೂನ್ 20 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಪಿಯುಸಿ ಅಥವಾ ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ತಮ್ಮ ಸ್ವ-ವಿವರದೊಂದಿಗೆ ನಗರದ ಪಾರ್ವತಿ ನಗರದಲ್ಲಿನ ಎಸ್‍ಎಲ್‍ವಿ ಟವರ್ ಹತ್ತಿರದ 2ನೇ ಮಹಡಿ, ನಂಬರ್-3ರ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಆಫಿಸ್ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ:9742718891, 9900827768, ಅಥವಾ 8277000619 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.