ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಮತ್ತು ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಜುಲೈ 1ರಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಮಾಣ ಪತ್ರ ಪಡೆಯುವಲ್ಲಿನ ವಿಳಂಬ ತಪ್ಪಿಸಲು ನೂತನ ವ್ಯವಸ್ಥೆ ಜಾರಿಗೆ ತರಲಾಗಿದ್ದು, 21 ದಿನಗಳೊಳಗೆ ನೋಂದಣಿ ಮಾಡಿ ಉಚಿತವಾಗಿ ಪ್ರಮಾಣ ಪತ್ರ ವಿತರಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.