ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ಫೆಬ್ರವರಿ ಅಂತ್ಯದೊಳಗೆ ‘ಗ್ರಾಮ ಒನ್’ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸೇವಾ ಕೇಂದ್ರಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವಂತೆ ಇ –ಆಡಳಿತ ಇಲಾಖೆಗೆ ಸೂಚನೆ ನೀಡಿದ್ದಾರೆ.
‘ಗ್ರಾಮ ಒನ್’ ಸೇವಾ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಬೇಕು. ‘ಅಟಲ್ ಜೀ ಜನಸ್ನೇಹಿ ಕೇಂದ್ರ’ಗಳಲ್ಲಿ ಅರ್ಜಿ ವಿಲೇವಾರಿ ನಿರ್ವಹಿಸಬೇಕು. ಇದಕ್ಕಾಗಿ ಅಗತ್ಯವಿರುವ ಕಂಪ್ಯೂಟರ್ ಮೂಲಸೌಕರ್ಯವನ್ನು ಇ-ಆಡಳಿತ ಇಲಾಖೆಯಿಂದ ಕಲ್ಪಿಸುವಂತೆ ಸೂಚಿಸಲಾಗಿದೆ.