
ಬಳ್ಳಾರಿ: 12 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ, ಕೊಡಗು, ಹಾವೇರಿ, ಬಳ್ಳಾರಿ, ಬೆಳಗಾವಿ, ತುಮಕೂರು, ಶಿವಮೊಗ್ಗ, ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಪ್ರಾಂಚೈಂಸಿ ಆಧಾರದಲ್ಲಿ ಸೇವಾ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ.
ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮ ಒನ್ ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯೋಜನೆ ರೂಪಿಸಿದ್ದರು. ಬಜೆಟ್‍ನಲ್ಲೂ ವಿಷಯ ಪ್ತಸ್ತಾಪಿಸಿದ್ದರು.ಜೊತೆಗೆ ಪ್ರಾಯೋಗಿಕವಾಗಿ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಆರಂಭಿಸುವ ಕಾರ್ಯ ನಡೆದಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿಯಲ್ಲಿ ಸುಮಾರು 750 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಈ ಕೇಂದ್ರಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಆಸಕ್ತರು ನ.11 ರೊಳಗಾಗಿ https://www.karnatakaone.gov.in/Public/GramOneFranchiseeTerms ವೆನ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೇವಾಸಿಂಧು ಜಿಲ್ಲಾ ಸಮಾಲೋಚಕ ಶಿವಾನಂದ ಮೊ.ಸಂ:9972628251 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.