
ದಾವಣಗೆರೆ: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ. ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ.
ಸಾರ್ವಜನಿಕರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಸೇವೆಗಳನ್ನು ಸರ್ಕಾರ ನಿಗಧಿಪಡಿಸಿದ ದರದಲ್ಲೇ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.