ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣಾ ವೇಳಾ ಪಟ್ಟಿ ಘೋಷಿಸಿದೆ.
ಜಿಲ್ಲಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಅ.13, ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅ.18, ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಅ.19, ಉಮೇದುವಾರಿಕೆಗಳನ್ನು ಹಿಂಗೆದುಕೊಳ್ಳಲು ಕೊನೆಯ ದಿನಾಂಕ ಅ.21, ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಅ.28 ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ.
ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ ಅ.30ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ, ಮತಗಳ ಎಣಿಕೆ ದಿನಾಂಕ ಅ.31 ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಅ.31 ಆಗಿರುತ್ತದೆ ಎಂದು ಹೇಳಲಾಗಿದೆ.