
ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಎರಡನೇ ಹಂತದಲ್ಲಿ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಗ್ರಾಮ ಪಂಚಾಯಿತಿಗೆಳಿಗೆ ಡಿಸೆಂಬರ್ 27 ರಂದು ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಾರ್ಯಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳನ್ನು ನಿಯೋಜಿಸಲಾಗಿದೆ.
ಚುನಾವಣಾ ಕಾರ್ಯಕ್ಕೆ ಬಸ್‍ಗಳನ್ನು ನಿಯೋಜಿಸಿರುವುದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಡಿಸೆಂಬರ್ 26, 27 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.