alex Certify BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ.

ಡಿಸೆಂಬರ್ 22 ರಂದು 117 ತಾಲೂಕುಗಳ 3021 ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಲಿದ್ದು, ಡಿಸೆಂಬರ್ 11 ನಾಮಪತ್ರಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 14 ಕೊನೆ ದಿನವಾಗಿದ್ದು, ಮೊದಲ ಹಂತದಲ್ಲಿ ಡಿಸೆಂಬರ್ 22 ರಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದೆ. ಎರಡನೆ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಡಿಸೆಂಬರ್ 11 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...