ಗದಗ: ಕೆಲಸದಿಂದ ತೆಗೆದಿದ್ದಕ್ಕೆ ಮನನೊಂದ ನೌಕರನೊಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಮಲ್ಲಪ್ಪ ಹೊಳಗುಂದಿ ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ಸಿಬ್ಬಂದಿ. ಮಲ್ಲಪ್ಪ ವಾಟರ್ ಮೆನ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು ಎನ್ನಲಾಗಿದೆ.
ಇಂಡಿಗೋ ವಿಮಾನದಲ್ಲಿ 599 ಗ್ರಾಂ ಚಿನ್ನದ ಕಡ್ಡಿಗಳು ಪತ್ತೆ
ಇದೇ ಕಾರಣಕ್ಕೆ ಮನನೊಂದ ಮಲ್ಲಪ್ಪ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಟೇಬಲ್ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.