ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31,000 ರೂ. ವೇತನ, 6,000 ರೂ. ಪಿಂಚಣಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳು ಭಾಗವಹಿಸಿದ್ದರು.
ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರುಗಂಟಿಗಳು, ಜವಾನರು, ಸ್ವಚ್ಛತಾಗಾರರು ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿದ್ದು, ಇವರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಮರಣ ಹೊಂದಿದ ನೌಕರರ ಕುಟುಂಬ ಸದಸ್ಯರಿಗೆ ಅನುಕಂಪದ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.
ಜನಸಂಖ್ಯೆಗೆ ಅನುಗುಣವವಾಗಿ ಪಂಚಾಯಿತಿಗಳನ್ನು ಮೇಲ್ದರ್ಜಗೇರಿಸಬೇಕು. ಲೆಕ್ಕ ಸಹಾಯಕರ ಹುದ್ದೆ ಸೃಷ್ಟಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.