ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.2ರಂದು ವಿಶೇಷ ಗ್ರಾಮ ಸಭೆ ಕರೆಯಲು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಜನರ ಯೋಜನೆ ಅಭಿಯಾನ ಅನುಷ್ಠಾನಕ್ಕೆ ಅ. 2ರಂದು ವಿಶೇಷ ಗ್ರಾಮ ಸಭೆ ನಡೆಸಬೇಕು. ಸಭೆಯಲ್ಲಿ 2025 -26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. 232 ತಾಲೂಕುಗಳ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಸೂಚನೆ ಅನ್ವಯ ಸಭೆ ಆಯೋಜಿಸಲು ತಿಳಿಸಲಾಗಿದೆ.
ಉನ್ನತ್ ಭಾರತ ಅಭಿಯಾನದಡಿ ದೇಶದ ಅನೇಕ ಉನ್ನತ ಶಿಕ್ಷಣ ಸಂಸ್ಥೆಗಳ ಬೋಧಕರು, ವಿದ್ಯಾರ್ಥಿಗಳ ಒಳಗೊಂಡಂತೆ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಲಹೆಗಳನ್ನು ನೀಡಿ ಉತ್ತಮ ಯೋಜನೆಗಳನ್ನು ಸಿದ್ಧಪಡಿಸಲು ಸಹಕರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಉತ್ತಮ ಶಿಕ್ಷಣ ಸಂಸ್ಥೆ ಬೋಧಕರು, ವಿದ್ಯಾರ್ಥಿಗಳನ್ನು ಸಭೆಯಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.