
ಚಿತ್ರದುರ್ಗ: ಸಿರಿಗೆರೆ ಗ್ರಾಮ ಪಂಚಾಯತ್ ಸದಸ್ಯನ ವಿರುದ್ಧ ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಸದಸ್ಯ ದೇವರಾಜ್ ಬಂಧಿತ ಆರೋಪಿ. ದೇವರಾಜ್, ಜಾತಿ ನಿಂದನೆ ಮಾಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯತ್ ಅಧ್ಯಕ್ಷಗೆ, ಪಿಡಿಓಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಪಂಚಾಯತಿ ಕ್ಲರ್ಕ್ ನೀಡಿದ ದೂರಿನ ಹಿನ್ನೆಲೆಯಲ್ಲಿ ದೇವರಾಜ್ ನನ್ನು ಪೊಲಿಸರು ಬಂಧಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.