ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ ಸಭೆಗೆ ಉಪಾಧ್ಯಕ್ಷೆ ಪತಿ ಭಾಗವಹಿಸಿದ್ದನ್ನು ಪ್ರಶ್ನಿಸಿದಕ್ಕೆ ಸದಸ್ಯನ ಮೇಲೆ ಹಲ್ಲೆ ಮಾಡಲಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯ ಈರಪ್ಪ ತಲವಾಯಿ ಅವರ ಮೇಲೆ ಉಪಾಧ್ಯಕ್ಷೆ ಶಬಾನಾ ಬೀ ಅವರ ಪತಿ ಚಮನಸಾಬ್ ಹಂಚಿನಾಳ ಹಲ್ಲೆ ಮಾಡಿದ್ದಾರೆ. ಗಾಯಾಳು ಗ್ರಾಪಂ ಸದಸ್ಯ ಈರಪ್ಪ ತಲವಾಯಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.