
ಮಂಡ್ಯ: ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ನಡೆದಿದೆ.
ಪರಸ್ಪರ ಚೇರ್ ಗಳನ್ನು ತೂರಿ ಗ್ರಾಮ ಪಂಚಾಯಿತಿ ಸದಸ್ಯರು ಬಡಿದಾಡಿಕೊಂಡಿದ್ದಾರೆ. ಸದಸ್ಯರ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೊಡೆದಾಡಿಕೊಂಡ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಚುನಾವಣೆ ಮುಂದೂಡಿದ್ದಾರೆ. ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.