ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಪಂಚಾಯಿತಿಗೆ 1 ಕೋಟಿ ರೂ. ನೀಡಲಾಗುವುದು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮಂಡಳಿ ಅಧ್ಯಕ್ಷರಾದ ಕಲಬುರ್ಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಘೋಷಿಸಿದ್ದಾರೆ.
ಕಲಬುರ್ಗಿಯಲ್ಲಿ ಆಯೋಜಿಸಿದ್ದ ಅಫಜಲ್ಪುರ, ಕಲ್ಬುರ್ಗಿ ದಕ್ಷಿಣ, ಕಲಬುರ್ಗಿ ಗ್ರಾಮಾಂತರ, ಜೇವರ್ಗಿ, ಆಳಂದ ಮಂಡಲ ವ್ಯಾಪ್ತಿಯ ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎಲ್ಲ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಪಂಚಾಯಿತಿಗೆ ಮಂಡಳಿಯಿಂದ 1 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.