ಬೆಂಗಳೂರು: ಹೆಸರಿಗೆ ಪಕ್ಷವಿಲ್ಲದ ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೂರು ವಾರಗಳ ಒಳಗೆ ವೇಳಾ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣೆಗೆ ತಯಾರಿ ನಡೆದಿದೆ.
ಅಧಿಕಾರ ವಿಕೇಂದ್ರೀಕರಣದ ಮೊದಲ ಹಂತವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ಆದರೆ, ಪಕ್ಷ ಸಂಘಟನೆಗೆ ಪೂರಕವಾದ ಈ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಕಣಕ್ಕಿಳಿಸಿ ಗೆಲ್ಲಿಸುವುದು ರಾಜಕೀಯ ಪಕ್ಷಗಳಿಗೆ ಪ್ರಮುಖವಾಗಿದೆ. ರಾಜ್ಯದ 5834 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗದಿಂದ ನಾಳೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು, ಚುನಾವಣೆ ಸಿದ್ಧತೆಗಳ ಬಗ್ಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಲಾಗಿದೆ.