ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಾಗುವುದು. 3 -4 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಕೊರೋನಾ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗದಿಂದ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆರಂಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಆಸಕ್ತಿ ತೋರದ ರಾಜಕೀಯ ಪಕ್ಷಗಳು ನಂತರದಲ್ಲಿ ಪಂಚಾಯತಿ ಚುನಾವಣೆಗೆ ಅಗತ್ಯ ತಯಾರಿ ಕೈಗೊಂಡಿವೆ. ಹೈಕೋರ್ಟ್ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ನೀಡಿದ್ದು, ಇಂದು ರಾಜ್ಯ ಚುನಾವಣಾ ಆಯೋಗದಿಂದ ಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.