alex Certify ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸುವ ‘ಗ್ರಾಮ ವಾಸ್ತವ್ಯ’ಕ್ಕೆ ಸಿಎಂ ಮರು ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸುವ ‘ಗ್ರಾಮ ವಾಸ್ತವ್ಯ’ಕ್ಕೆ ಸಿಎಂ ಮರು ಚಾಲನೆ

ದಾವಣಗೆರೆ: ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮರು ಚಾಲನೆ ನೀಡಲಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸುರಹೊನ್ನೆ ಮತ್ತು ಕುಂದೂರು ಗ್ರಾಮದಲ್ಲಿ ಇವತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಕಂದಾಯ ಸಚಿವ ಆರ್.ಅಶೋಕ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಸಿಎಂ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಬೆಂಗಳೂರಿಗೆ ತೆರಳಲಿದ್ದಾರೆ. ಸಚಿವರಾದ ಆರ್. ಅಶೋಕ್, ಬೈರತಿ ಬಸವರಾಜ, ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...