ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆದಿದ್ದ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಮುಕ್ತಾಯವಾಗಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಿದ್ದ ವಿಪಕ್ಷಗಳ ಸಭೆಯಲ್ಲಿ 26 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಶಿವಸೇನೆಯ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಸಭೆಯಲ್ಲಿ ಲೋಕಸಭಾ ಚುನವಣೆಯಲ್ಲಿ ಒಗ್ಗಟ್ಟಿನ ಬಗ್ಗೆ 26 ಪಕ್ಷಗಳ ಸಾಮೂಹಿಕ ಹೋರಾಟ ಸಂಕಲ್ಪ ಮಾಡಲಾಗಿದೆ. ಧ್ವೇಷ ರಾಜಕಾರಣದ ವಿರುದ್ಧ ಹೋರಾಟಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಲಾಗಿದೆ. ಭಾರತ ರಕ್ಷಿಸಿ ಬಿಜೆಪಿ ಸೋಲಿಸುವ ಬಗ್ಗೆ ಚರ್ಚೆಯಾಗಿದೆ. ಸೀಟು ಹಂಚಿಕೆ ವಿಚಾರವಾಗಿಯೂ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.