
ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದು, ಅವರಿಗೆ ಸಾದಹಳ್ಳಿಯ ಟೋಲ್ ಗೇಟ್ ಬಳಿ ಅದ್ದೂರಿ ಸ್ವಾಗತ ನೀಡಲಾಗಿದೆ. ಬೃಹತ್ ಹೂವಿನ ಹಾರ ಹಾಗೂ ಸೇಬಿನ ಹಾರ ಹಾಕಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಜೆಸಿಬಿ ಮೇಲೆ ನಿಂತು ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ಹೂವಿನ ಮಳೆಗರೆದ ಕಾರ್ಯಕರ್ತರು ಬಳಿಕ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯುತ್ತಿದ್ದಾರೆ. ಹೆಬ್ಬಾಳ ಮೇಕ್ರಿ ಸರ್ಕಲ್ ಬಳಿ ಕಾದು ನಿಂತಿರುವ ಇನ್ನೂ ಸಾಕಷ್ಟು ಸಂಖ್ಯೆಯ ಕಾರ್ಯಕರ್ತರು ಅವರ ಸ್ವಾಗತಕ್ಕೆ ಸಜ್ಜಾಗಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಯಲಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಲಾಗುತ್ತದೆ.