ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ವತಿಯಿಂದ ರಾಜ್ಯಕ್ಕೆ 235.14 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಹಾಯಕ ಸಚಿವರಾದ ಶೋಭಾ ಕರಂದ್ಲಾಜೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 761.89 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಇದರಲ್ಲಿ ಮೂರನೇ ಕಂತಿನ ಹಣವಾಗಿ 235.14 ಕೋಟಿ ರೂ.ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.