ವಾಷಿಂಗ್ಟನ್: ಕೊರೋನಾ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಅಮೆರಿಕದ ರೋಗ ನಿಯಂತ್ರಣ ಸಂಸ್ಥೆ ಘೋಷಣೆ ಮಾಡಿದೆ. ಈ ಕುರಿತಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ವಿಶ್ವದಾದ್ಯಂತ ಕೊರೊನಾ ಸೋಂಕು ವ್ಯಾಪಿಸಿದ್ದು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಕೊರೋನಾ ಗೆದ್ದ ಇಸ್ರೇಲ್ ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.
ಕೊರೋನಾ ಲಸಿಕೆ ಪಡೆದರೂ ಕೂಡ ಸೋಂಕು ತಗಲುವ ಸಾಧ್ಯತೆ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕೆಂದು ಹೇಳಲಾಗಿತ್ತು. ಆದರೆ, ಅಮೆರಿಕ ರೋಗ ನಿಯಂತ್ರಣ ಸಂಸ್ಥೆ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಬೇಕಿಲ್ಲವೆಂದು ತಿಳಿಸಿದೆ.
ಕೊರೋನಾ ಸಾಂಕ್ರಾಮಿಕ ಪೂರ್ವ ಜೀವನಕ್ಕೆ ಮರಳುವ ಪ್ರಮುಖ ಹೆಜ್ಜೆಯಾಗಿ ಅಮೆರಿಕ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಶುಭ ಸುದ್ದಿ ನೀಡಿದ್ದು, ಲಸಿಕೆ ಹಾಕಿದ ಜನರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಇಂದು ಅಮೆರಿಕನ್ನರಿಗೆ ಗ್ರೇಟ್ ಡೇ ಆಗಿದೆ ಎಂದು ಜೋ ಬೈಡನ್ ಹೇಳಿದ್ದಾರೆ.
ಮಾಸ್ಕ್ ಧರಿಸದೆ ಲಸಿಕೆ ಪಡೆದುಕೊಂಡ ರಿಪಬ್ಲಿಕನ್ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ನಂತರ ರೋಸ್ ಗಾರ್ಡನ್ ಭಾಷಣದಲ್ಲಿ ಮಾತನಾಡಿದ ಅವರು, ನೀವು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದರೆ ಇನ್ನು ಮುಂದೆ ಮಾಸ್ಕ್ ಧರಿಸಬೇಕಿಲ್ಲ ಎಂದು ಹೇಳಿದ್ದಾರೆ. ಲಸಿಕೆ ಪಡೆದುಕೊಳ್ಳಿ, ಲಸಿಕೆ ಪಡೆಯುವವರೆಗೂ ಮಾಸ್ಕ್ ಧರಿಸಿ. ಮಾರ್ಗಸೂಚಿ ಪ್ರಕಾರ, ಬಸ್, ವಿಮಾನ, ಆಸ್ಪತ್ರೆ, ಕಾರಾಗೃಹ ಅಥವಾ ಜನಸಂದಣಿ ಪ್ರದೇಶದಲ್ಲಿ ಕಡ್ಡಾಯವಾಗಿ ಧರಿಸಬೇಕಿತ್ತು. ಅಮೆರಿಕದಲ್ಲಿ ಲಸಿಕೆ ಪಡೆದುಕೊಂಡವರು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಹೇಳಲಾಗಿದ್ದು, ಇದು ಕೊರೋನಾ ಪೂರ್ವ ಜೀವನಕ್ಕೆ ಮರಳುವ ಮೊದಲ ಹೆಜ್ಜೆ ಎನ್ನಲಾಗಿದೆ,