alex Certify BIG NEWS : ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮಾಸಿಕ ವೇತನ 2000 ಹೆಚ್ಚಳ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮಾಸಿಕ ವೇತನ 2000 ಹೆಚ್ಚಳ..!

ಬೆಂಗಳೂರು : ಗ್ರಾಮ ಸಹಾಯಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಸಹಾಯಕರ ವೇತನ 2 ಸಾವಿರಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಕಂದಾಯ ಇಲಾಖೆಯಲ್ಲಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಮಿತ ವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ಮಂಜೂರು ಮಾಡಲಾಗಿದ್ದು, ಸದ್ಯ ಕಾರ್ಯ ನಿರ್ವಹಿಸುತ್ತಿರುವ 9,903 ಗ್ರಾಮ ಸಹಾಯಕರ ಮಿತ ವೇತನವನ್ನು ಮಾಸಿಕ ₹ 13,000 ದಿಂದ ₹ 15,000ಕ್ಕೆ ಹೆಚ್ಚಿಸಲು ಹಣಕಾಸು ಇಲಾಖೆ, ಸಮ್ಮತಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಿತ ವೇತನವನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಮಾಸಿಕ ₹ 2 ಸಾವಿರ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಗ್ರಾಮ ಸಹಾಯಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...