ನವದೆಹಲಿ : ಹೊಸ ವರ್ಷಕ್ಕೆ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿದೆ.
ಹೌದು. ಪ್ರತಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರ್ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ಆದರೆ ಈ ಬೆಲೆ ಕಡಿತ ವಾಣಿಜ್ಯ ಸಿಲಿಂಡರ್‌ಗಳಿಗೆ ಅಂದರೆ 19Kg LPG ಸಿಲಿಂಡರ್‌ಗಳಿಗೆ ಮಾತ್ರ ಆಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅಂದರೆ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಪರಿಷ್ಕೃತ ದರ ದೇಶದ ಎಲ್ಲ ಪ್ರದೇಶಕ್ಕೂ ಅನ್ವಯವಾಗಲಿದೆ.
ಎಲ್ಪಿಜಿ ಸಿಲಿಂಡರ್ಗಳ ಬೆಲೆ 14.50 ರೂ.ಗಳಷ್ಟು ಕಡಿಮೆಯಾಗಿದೆ. ಅದೇನೇ ಇದ್ದರೂ, ಈ ಪರಿಹಾರವು ವಾಣಿಜ್ಯ ಸಿಲಿಂಡರ್ಗಳಿಗೆ, ನಿರ್ದಿಷ್ಟವಾಗಿ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳಿಗೆ ಮಾತ್ರ ಅನ್ವಯಿಸುತ್ತದೆ. ದೇಶೀಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ, ವಿಶೇಷವಾಗಿ 14 ಕೆಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದ್ದು, ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ.