ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಣ್ಣ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ನೀಡುತ್ತಿದ್ದು, ಇದೀಗ ಮತ್ತೊಂದು ಗುಡ್ ನ್ಯೂಸ್ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ರೈತರಿಗೆ ಈಗ ವಾರ್ಷಿಕವಾಗಿ ನೀಡಲಾಗುತ್ತಿರುವ 6,000 ರೂಪಾಯಿಗಳ ಮೊತ್ತವನ್ನು 8,000 ರೂಪಾಯಿಗಳಿಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಬ್ಲೂಮ್ ಬರ್ಗ್ ವರದಿ ಮಾಡಿದ್ದು, ಕಿಸಾನ್ ಸಮ್ಮಾನ್ ಯೋಜನೆ ಮೊತ್ತದಲ್ಲಿ 2000 ರೂಪಾಯಿ ಏರಿಕೆ ಮಾಡುವ ಕುರಿತಂತೆ, ಸರ್ಕಾರದ ಹಂತದಲ್ಲಿ ಈಗಾಗಲೇ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.
ಹಣಕಾಸು ಇಲಾಖೆಯ ಅನುಮೋದನೆ ದೊರೆತರೆ ಈ ಎರಡು ಸಾವಿರ ರೂಪಾಯಿಗಳ ಏರಿಕೆಯೊಂದಿಗೆ ಈಗ ವಾರ್ಷಿಕವಾಗಿ 6,000 ರೂಪಾಯಿ ಪಡೆಯುತ್ತಿರುವ ಸಣ್ಣ ರೈತರು 8,000 ರೂಪಾಯಿಗಳನ್ನು ಪಡೆಯಲಿದ್ದಾರೆ.