alex Certify ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು : ಮೀನುಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇಂದಿನ ಬಜೆಟ್ ನಲ್ಲಿ ಹಲವು ಬಂಪರ್ ಕೊಡುಗೆ ಘೋಷಣೆ ಮಾಡಿದೆ.

2024-25ನೇ ಬಜೆಟ್ನಲ್ಲಿ ಮೀನುಗಾರರ ರಕ್ಷಣೆಗಾಗಿ ವಿವಿಧ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡುವ ಮೂಲಕ ಬಂಪರ್ ಕೊಡುಗೆ ನೀಡಿದೆ.

*ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳ ಅನುಷ್ಠಾನ
*ಮೀನುಗಾರರ ರಕ್ಷಣೆಗೆ ಸಮುದ್ರ ಅಂಬ್ಯುಲೆನ್ಸ್ ಖರೀದಿಗೆ 7 ಕೋಟಿ ರೂ.ಅನುದಾನ
* ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ. ಗಳಿಗೆ ಹೆಚ್ಚಳ.
*ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಂಡಿಸಿದ್ದು, ಹಲವು ಕ್ಷೇತ್ರಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಇಂದು 15ನೇ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...