ಬೆಂಗಳೂರು : ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ‘ಕರ್ತವ್ಯ ಭತ್ಯೆ’ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆ ಪೂರಕ ಪಡೆಯಾಗಿ ಗೃಹರಕ್ಷಕದಳವು ಕಾರ್ಯನಿರ್ವಹಿಸುತ್ತಿದೆ. ಪೊಲೀಸ್ ಇಲಾಖೆ ಮತ್ತು ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ ವಿವಿಧ ಕರ್ತವ್ಯಗಳಿಗೆ ಗೃಹರಕ್ಷಕರನ್ನು ನಿಯೋಜಿಸಲಾಗುತ್ತಿದೆ.
ನೋಂದಣಿಗೊಂಡ ಗೃಹರಕ್ಷಕರಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಜೀವ, ಆಸ್ತಿ-ಪಾಸ್ತಿ ರಕ್ಷಿಸುವುದು, ಸಮಾಜದಲ್ಲಿ ಶಾಂತಿಯನ್ನು ಕಾಪಾಡುವಲ್ಲಿ, ಪ್ರಾಕೃತಿಕ ಮತ್ತು ಮಾನವ ನಿರ್ಮಿತ ವಿಕೋಪಗಳೆ ಸಂದರ್ಭಗಳಲ್ಲಿ ರಕ್ಷಣೆ ಮತ್ತು ಪರಿಹಾರ ಮುಂತಾದ ಕರ್ತವ್ಯಗಳನ್ನು ಗೃಹರಕ್ಷಕರು ನಿರ್ವಹಿಸುತ್ತಿದ್ದಾರೆ.
ಈ ಹಿನ್ನೆಲೆ ಗೃಹರಕ್ಷಕದಳ ಹಾಗೂ ಪೌರರಕ್ಷಣಾ ಇಲಾಖೆಯ ಗೃಹರಕ್ಷಕ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ಕರ್ತವ್ಯ ಭತ್ಯೆ/ ತರಬೇತಿ ಭತ್ಯೆ ಮತ್ತು ಕವಾಯತು ಭತ್ಯೆಯ ದರಗಳನ್ನು ಸರ್ಕಾರವು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.