ಬೆಂಗಳೂರು : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಗುಡ್ ನೀಡಿದ್ದು, ಇನ್ಮುಂದೆ ನಿಗದಿತ ಸಮಯಕ್ಕೆ ‘ಗೃಹಲಕ್ಷ್ಮಿ’ ಹಣ ತಲುಪಲಿದೆ.
ಹೌದು, ಫಲಾನುಭವಿಗಳಿಗೆ ಹಣ ಜಮಾ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ ನಿಗದಿತ ಸಮಯದಲ್ಲಿ ಹಣ ತಲುಪಿಸುವುದಕ್ಕೆ ಆರ್ಥಿಕ ಇಲಾಖೆ ಡೆಡ್ ಲೈನ್ ನೀಡಿದೆ.
ಆರ್ಥಿಕ ಇಲಾಖೆಯ ಡಿಡಿಒಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದ್ದು, ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಲು ಇನ್ಮುಂದೆ ಡೆಡ್ ಲೈನ್ ಇರಲಿದೆ. ಪ್ರತಿ ತಿಂಗಳ 20 ನೇ ತಾರೀಖಿನೊಳಗೆ ಹಣ ಹಾಕಲು ಆರ್ಥಿಕ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.