ನವದೆಹಲಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಬಂದ ಬೆನ್ನಲ್ಲೇ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿ 6 ದಿನಗಳಲ್ಲಿ 9 ಕೋಟಿಗೂ ಹೆಚ್ಚು ನಗದು ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದೆ.
ಮಾರ್ಚ್ 16 ರಂದು ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ರಾಜ್ಯದಲ್ಲಿ ಒಟ್ಟು 9.64 ಕೋಟಿ ಜಪ್ತಿ ಮಾಡಿಕೊಳ್ಳಲಾಗಿದೆ. 15.6 ಲಕ್ಷ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳಿಗೆ ಕೊಂಡೊಯ್ಯುತ್ತಿದ್ದ ವಸ್ತುಗಳು, 7.20 ಲಕ್ಷ ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ ಹಾಗೂ 53 ಲಕ್ಷಕ್ಕೂ ಅಧಿಕ ಮೌಲ್ಯದ 52.12 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.ಇನ್ನು ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಎಂಬ ಎರಡು ವಿಭಾಗಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ ಮೇ 7ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ.