
ಬೆಂಗಳೂರು: ಗ್ರೇಟರ್ ಬೆಂಗಳೂರು ಮಸೂದೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರಕ್ಕೆ ವಾಪಾಸ್ ಕಳುಹಿಸಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯಪಾಲರು ಕೆಲ ಸ್ಪಷ್ಟನೆಗಳನ್ನು ಕೇಳಿ ಗ್ರೇಟರ್ ಬೆಂಗಳೂರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಹೇಳಿದರು.
2023ರ ಆಗಸ್ಟ್ ನಿಂದ ಈವರೆಗೆ 119 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಈ ಪೈಕಿ 83 ಮಸೂದೆಗಳನ್ನು ಕಾಯ್ದೆಯಾಗಿ ಜಾರಿಗೊಳಿಸಲಾಗಿದೆ. ನಾಲ್ಕು ಮಸೂದೆಗಳು ರಾಜ್ಯಪಾಲರ ಬಳಿ ಇದೆ. 7 ಮಸೂದೆಗಳ ಕುರಿತು ರಾಜ್ಯಪಾಲರು ಸ್ಪಷ್ಟೀಕರಣ ಕೇಳಿದ್ದು, ಐದು ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.