
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೋಳು ಮಾಡುವುದು, ಒಡೆದು ಆಳುವುದರಲ್ಲಿ ಕಾಂಗ್ರೆಸ್ ಗೆ ಕಾಂಗ್ರೆಸ್ಸಿಗರೇ ಸಾಟಿ ಎಂದು ಕಿಡಿಕಾರಿದ್ದಾರೆ.
ಅಂದು: ಅಖಂಡ ಭಾರತವನ್ನು ಹೋಳು ಮಾಡಿತು! ಇಂದು: ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ದುರುದ್ದೇಶವಿಷ್ಟೇ. ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಮೇತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಲೂಟರ್ ಉದ್ದೇಶ ಕೊಳ್ಳೆಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ, ವಿಕೇಂದ್ರೀಕರಣವಲ್ಲ, ಲೂಟಿ ವಿಕೇಂದ್ರೀಕರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಲೂಟಿಕೋರರಾದ ಮೊಹಮ್ಮದ್ ಘಜ್ನಿ, ಮೊಹಮ್ಮದ್ ಘೋರಿ ಸಂಪದ್ಬರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.