ಗ್ರೇಟರ್ ನೋಯ್ಡಾದ ಬಿಸ್ರಖ್ ಪ್ರದೇಶದ ವಸತಿ ಸೊಸೈಟಿಯಲ್ಲಿ 28 ವರ್ಷದ ವ್ಯಕ್ತಿಯೊಬ್ಬರು 10ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಬಿಸ್ರಾಖ್ನ ಎತ್ತರದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಅಜಂಗಢ ಮೂಲದ ಮೃತರು ಕಟ್ಟಡದ ಹತ್ತನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ಬಿಸ್ರಾಖ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಅವರು ಗ್ರೇಟರ್ ನೋಯ್ಡಾದ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದರು. ತಮ್ಮ ಸೋದರ ಮಾವನೊಂದಿಗೆ ವಾಸಿಸುತ್ತಿದ್ದರು. ಕಳೆದ ನಾಲ್ಕೈದು ತಿಂಗಳಿನಿಂದ ಬೇಸರದಿಂದ ಇದ್ದರು ಎನ್ನುವ ಮಾಹಿತಿ ಗೊತ್ತಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.