![](https://kannadadunia.com/wp-content/uploads/2023/07/Screenshot-2023-07-17-182709.png)
ಮಹಿಳೆಯೊಬ್ಬರು ಟೋಲ್ ಬೂತ್ಗೆ ಪ್ರವೇಶಿಸುತ್ತಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಟೋಲ್ ರೂಮ್ಗೆ ಎಂಟ್ರಿ ಕೊಟ್ಟ ಮಹಿಳೆಯು, ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾಳೆ. ಇದಾದ ಬಳಿಕ ಮಹಿಳಾ ಸಿಬ್ಬಂದಿಯ ಕಿವಿಯನ್ನು ಎಳೆದಿದ್ದು ಮಾತ್ರವಲ್ಲದೇ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾಳೆ.
ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅಧಿಕಾರಿಗಳು ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಗ್ರೇಟರ್ ನೋಯ್ಡಾದ ದಾದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.